ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಗಸ್ತು ನಡೆಸುತ್ತಿದ್ದ ಅಮೆರಿಕದ ಅತ್ಯಾಧುನಿಕ ಅಪಾಚೆ ಹೆಲಿಕಾಪ್ಟರ್ ಅನ್ನು ಇರಾನ್ ಹೊಡೆದುರುಳಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದು, ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಸಿದ್ದಾರೆ.

ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿ ರಕ್ಷಿಸಲ್ಪಟ್ಟಿದ್ದಾರೆ ಎಂದು ಟ್ರಂಪ್ ತಿಳಿಸಿದ್ದಾರೆ. “ಇರಾನ್ ನಡೆಸಿದ ದಾಳಿಗೆ ಅಮೆರಿಕ ಪ್ರತಿಕ್ರಿಯಿಸಲೇಬೇಕು” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.

ಈ ನಡುವೆ, ಇರಾನ್ ವಿರುದ್ಧ ಮತ್ತಷ್ಟು ಕಾರ್ಯಾಚರಣೆಗೆ ಸಿದ್ಧವಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. ಇತ್ತೀಚಿನ ದಾಳಿಗಳು ದೊಡ್ಡ ಮಟ್ಟದ ಕಾರ್ಯಾಚರಣೆಗೆ ಪೂರ್ವಸಿದ್ಧತೆ ಎಂದು ಇಸ್ರೇಲಿ ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಹೇಳಿದ್ದಾರೆ.

ಇರಾನ್ ಕೂಡ ಕಠಿಣ ನಿಲುವು ವ್ಯಕ್ತಪಡಿಸಿದ್ದು, ರಾಜತಾಂತ್ರಿಕ ಮಾರ್ಗವನ್ನು ಗೌರವಿಸುತ್ತೇವೆ ಆದರೆ ಅಗತ್ಯವಿದ್ದರೆ ಪ್ರತಿಕ್ರಿಯಿಸಲು ಸಿದ್ಧವಿದ್ದೇವೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಎಲ್ಲಾ ದಾಳಿಗಳನ್ನು ತಕ್ಷಣ ನಿಲ್ಲಿಸುವಂತೆ ಕರೆ ನೀಡಿದ್ದು, ಸಮಸ್ಯೆಗಳಿಗೆ ಮಿಲಿಟರಿ ಪರಿಹಾರವಿಲ್ಲ, ಸಂವಾದ ಮತ್ತು ಮಾತುಕತೆಗಳೇ ಮಾರ್ಗ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *